ಚಿಕ್ಕಮಗಳೂರು: ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ತಪ್ಪಿಸಿಕೊಳ್ಳುವಾಗ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಸಾಪುರದಲ್ಲಿ ಘಟನೆ ನಡೆದಿದೆ. ಗುಡ್ಡೆಕೊಪ್ಪ ಗ್ರಾಮದ ರಮೇಶ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಬಸಾಪುರ ಗ್ರಾಮದ ಸಮೀಪ ಅರಣ್ಯದಲ್ಲಿ ರಾತ್ರಿ ಗುಂಪು ಕಟ್ಟಿಕೊಂಡು ಇಸ್ಪೀಟ್ ಆಡುತ್ತಿದ್ದರು. 9 ಜನರ ಪೈಕಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪೊಲೀಸರ ದಾಳಿ ವೇಳೆ ಪೊಲೀಸರಿಗೆ ಹೆದರಿ ಓಡಿ ಹೋಗುತ್ತಿದ್ದ ರಮೇಶ್ ಸಾವನ್ನಪ್ಪಿದ್ದಾರೆ. ಜಾರಿ ಬಿದ್ದು ಬಂಡೆಗೆ ತಲೆ ತಾಗಿ ರಮೇಶ್ ಮೃತಪಟ್ಟಿದ್ದಾರೆ. ತೀವ್ರ ರಕ್ತಸ್ರಾವದ ಸ್ಥಿತಿಯಲ್ಲಿ ರಮೇಶ್ ಮೃತದೇಹ ಪತ್ತೆಯಾಗಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

