Breaking News

ಸಿಗರೇಟ್ ಸೇದುತ್ತಿದ್ದವರನ್ನು ಪ್ರಶ್ನಿಸಿದ್ದಕ್ಕೆ ಕೊಲೆ: 9 ಅಪರಾಧಿಗಳಿಗೆ ಜೀವಾವಧಿ

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಹರೀಶ್ (32) ಎಂಬಾತನನ್ನು ಕೊಲೆ ಮಾಡಿದ್ದ 8 ಮಂದಿ ಅಪರಾಧಿಗಳಿಗೆ ನಗರದ 58ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2017ರ ಅ.1ರಂದು ಶಾಂತಿನಗರದ ‘ಬಿ’ ಸ್ಟ್ರೀಟ್‌ನಲ್ಲಿ ವಿಜಯದಶಮಿ ಪಲ್ಲಕ್ಕಿ ಉತ್ಸವ ನಡೆಯುತ್ತಿದ್ದ ವೇಳೆ ಘಟನೆ ನಡೆದಿತ್ತು. ಧೂಮಪಾನ ನಿಲ್ಲಿಸಿ ಸ್ಥಳದಿಂದ ತೆರಳುವಂತೆ ಹರೀಶ್ ಎಚ್ಚರಿಸಿದ್ದ. ಇದರಿಂದ ಕೋಪಗೊಂಡ ಆರೋಪಿಗಳು ಬಳಿಕ ಮಾರಕಾಸ್ತ್ರಗಳೊಂದಿಗೆ ಬಂದು ಹರೀಶ್ ಅವರನ್ನು ಕೊಲೆ ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಅಶೋಕನಗರ ಠಾಣೆ ಪೊಲೀಸರು, ತಾಯಿ, ಪತ್ನಿ ಹಾಗೂ ಮೂವರು ಸ್ನೇಹಿತರ ಹೇಳಿಕೆ ಆಧರಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಾಕ್ಷಿಗಳ ಗುರುತಿನ ಪರೇಡ್‌ನಲ್ಲೂ ಆರೋಪಿಗಳನ್ನು ನಿಖರವಾಗಿ ಗುರುತಿಸಲಾಗಿದ್ದು, ಬಲವಾದ ಸಾಕ್ಷ್ಯಾಧಾರದ ಆಧಾರದಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *