Breaking News

ಚಲಿಸುತ್ತಿದ್ದಾಗಲೇ ದಿಢೀರ್ ಬೆಂಕಿ; ಸುಟ್ಟು ಕರಕಲಾದ ಕಾರು..!-

ಬೆಂಗಳೂರು: ಆನೇಕಲ್ ತಾಲೂಕಿನ ಹೊಸೂರು ಮುಖ್ಯರಸ್ತೆಯ ನೆರಳೂರು ಗೇಟ್ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ. ಕಾರಿನ ಎಂಜಿನ್‌ನಿಂದ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಾಲಕ ಸಮಯಪ್ರಜ್ಞೆ ಮೆರೆದು ರಸ್ತೆ ಬದಿಗೆ ನಿಲ್ಲಿಸಿ ಹೊರಬಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದ್ದು, ಸಮೀಪದ ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕಾರಿನಲ್ಲಿದ್ದವರು ಸಮಯಕ್ಕೆ ಸರಿಯಾಗಿ ಹೊರಬಂದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅತ್ತಿಬೆಲೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *