Breaking News

ಸೈಬರ್ ವಂಚನೆಗೆ ಪುತ್ತೂರು ಮೂಲದ ಯುವಕ ಸೆರೆ

ಮಂಗಳೂರು: ಸೈಬರ್ ವಂಚನೆಗೆ ಬಳಸಲಾಗುತ್ತಿದ್ದ ಮ್ಯೂಲ್ ಬ್ಯಾಂಕ್ ಖಾತೆಗಳ ಜಾಲದ ವಿರುದ್ಧ ಮುಂಬಯಿ ಸೈಬರ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಪುತ್ತೂರು ಮೂಲದ ರಕ್ಷಿತ್ ಹೆಗ್ಡೆ (35) ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹10 ಲಕ್ಷ ನಗದು, 16 ಮೊಬೈಲ್‌ಗಳು, 23 ಸಿಮ್‌ಕಾರ್ಡ್‌ಗಳು, 22 ಚೆಕ್‌ಬುಕ್‌ಗಳು ಹಾಗೂ 31 ಕಂಪನಿಗಳ ಸೀಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೈಬರ್ ವಂಚನೆಯ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಿ, ಬಳಿಕ ಚೆಕ್‌ಗಳ ಮೂಲಕ ಹಿಂಪಡೆದು ಜಾಲಕ್ಕೆ ವರ್ಗಾಯಿಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳು ದೇಶದ ವಿವಿಧೆಡೆ ದಾಖಲಾಗಿರುವ 84 ಸೈಬರ್ ಅಪರಾಧ ಪ್ರಕರಣಗಳೊಂದಿಗೆ ಸಂಪರ್ಕ ಹೊಂದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ವಶಪಡಿಸಿಕೊಂಡ ವಸ್ತುಗಳ ಪರಿಶೀಲನೆ ಮುಂದುವರಿದಿದ್ದು, ಜಾಲದ ಹಿಂದಿರುವ ಪ್ರಮುಖ ವ್ಯಕ್ತಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *