Breaking News

ಚಿಕ್ಕಮಗಳೂರಲ್ಲಿ ಆಹಾರ ಇಲಾಖೆ ಅಧಿಕಾರಿಗಳ ದಾಳಿ – 30 ಕೆಜಿ ನಕಲಿ ನಾಟಿ ತುಪ್ಪ ವಶಕ್ಕೆ!

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯ ಮನೆಯೊಂದರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ನಗರ ಠಾಣೆ ಪೊಲೀಸರು ದಾಳಿ ನಡೆಸಿ 30 ಕೆ.ಜಿ.ಗೂ ಹೆಚ್ಚು ನಕಲಿ ನಾಟಿ ತುಪ್ಪ ವಶಪಡಿಸಿಕೊಂಡಿದ್ದಾರೆ. ಮನೆಯೊಳಗೆ ಡಾಲ್ಡಾ ಹಾಗೂ ರಾಸಾಯನಿಕ ಬಳಸಿ ತುಪ್ಪ ತಯಾರಿಸಿ, ಅದನ್ನು ನಾಟಿ ತುಪ್ಪ ಎಂದು ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅಧಿಕಾರಿಗಳು ದಾಳಿ ನಡೆಸುವ ವೇಳೆ ದಂಧೆಕೋರರು ಮನೆಯ ಬಾಗಿಲು ಲಾಕ್ ಮಾಡಿ ಪರಾರಿಯಾಗಿದ್ದಾರೆ. ಕಳೆದ ವಾರವೂ ಪಾಳುಬಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿ ನಕಲಿ ತುಪ್ಪ ವಶಪಡಿಸಿಕೊಳ್ಳಲಾಗಿತ್ತು. ಬಳ್ಳಾರಿ ಮೂಲದ ಒಂದೇ ತಂಡ ನಿರಂತರವಾಗಿ ಈ ದಂಧೆ ನಡೆಸುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *