ಬೆಂಗಳೂರು, ಆ.30: ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ಸಂಬಂಧ ಸಿಐಡಿ ತನಿಖೆ ಚುರುಕುಗೊಂಡಿದ್ದು, ಎಕ್ಸಾಮ್ ಕಂಟ್ರೋಲರ್ ಆಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಬಂಧಿಸಲಾಗಿದೆ. ಮತ್ತಷ್ಟು ಬಂಧನದ ಸಾಧ್ಯತೆ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ ಕೆಲ ಅಧಿಕಾರಿಗಳು ಹಾಗೂ ಸದಸ್ಯರಲ್ಲಿ ಆತಂಕ ಶುರುವಾಗಿದೆ. ಓಎಂಆರ್ ಶೀಟ್ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕುಮಾರ್ ಕೈವಾಡವಿರುವ ಬಗ್ಗೆ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದೆ. ಅಭ್ಯರ್ಥಿಗಳಿಗೆ ಹೋಟೆಲ್ ಹಾಗೂ ರೆಸಾರ್ಟ್‌ಗಳಲ್ಲಿ ತರಬೇತಿ ನೀಡಿದ ವಿಚಾರದಲ್ಲೂ ಅವರ ಪಾತ್ರದ ಬಗ್ಗೆ ಸಿಐಡಿ ಶಂಕೆ ವ್ಯಕ್ತಪಡಿಸಿದೆ. ಇದೇ ವೇಳೆ ಕಳೆದ ಮೂರು ವರ್ಷಗಳಲ್ಲಿ ನಡೆದ ನಾಲ್ಕು ನೇಮಕಾತಿ ಪರೀಕ್ಷೆಗಳ ಬಗ್ಗೆಯೂ ಸಿಐಡಿ ತನಿಖೆ ನಡೆಸುತ್ತಿದೆ. ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮದ ಬಗ್ಗೆಯೂ ಮಾಹಿತಿ ಕಲೆಹಾಕಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

