ಬೆಂಗಳೂರು, ಆಗಸ್ಟ್ 30: ಡೇಟಿಂಗ್ ಆಪ್ ಮೂಲಕ ಯುವಕರನ್ನು ಬಲೆಗೆ ಬೀಳಿಸಿ ಹಣ ದೋಚುತ್ತಿದ್ದ ಜಾಲವೊಂದು ಬೆಳಕಿಗೆ ಬಂದಿದೆ. ಹೆಬ್ಬಗೋಡಿ ಠಾಣಾ ವ್ಯಾಪ್ತಿಯಲ್ಲಿ 33 ವರ್ಷದ ಯುವಕನನ್ನು ಅಪಹರಿಸಿ, ಬೆದರಿಸಿ ಬರೋಬ್ಬರಿ ₹3.7 ಲಕ್ಷ ದೋಚಲಾಗಿದೆ. ಡೇಟಿಂಗ್ ಆಪ್‌ನಲ್ಲಿ ಪರಿಚಯವಾಗಿದ್ದ ಯುವತಿ ಭೇಟಿಯಾಗುವಂತೆ ಕರೆಸಿಕೊಂಡು, ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾಳೆ. ಅಲ್ಲಿ ನಾಲ್ವರು ವ್ಯಕ್ತಿಗಳು ಯುವಕನನ್ನು ಬೆದರಿಸಿ ಅಪಹರಿಸಿ, ನಗದು ಹಾಗೂ ಡೆಬಿಟ್-ಕ್ರೆಡಿಟ್ ಕಾರ್ಡ್‌ಗಳನ್ನು ಕಸಿದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ ₹45 ಸಾವಿರ ಡ್ರಾ ಮಾಡಿಕೊಂಡಿದ್ದಾರೆ. ನಂತರ ಕ್ರೆಡಿಟ್ ಕಾರ್ಡ್ ಪಾಸ್‌ವರ್ಡ್ ಬದಲಿಸಿ ₹3.2 ಲಕ್ಷವನ್ನು ಮತ್ತೊಂದು ಖಾತೆಗೆ ವರ್ಗಾಯಿಸಿಕೊಂಡು, ಯುವಕನನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಕುರಿತು ಹೆಬ್ಬಗೋಡಿ ಪೊಲೀಸರು ಅಪಹರಣ ಹಾಗೂ ಸುಲಿಗೆ ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಮಾಹಿತಿ ಆಧರಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

