ಹಾಸನ ನಗರದ ಸಂತೇಪೇಟೆಯ ಜಿಲ್ಲಾ ಕಾರಾಗೃಹದಲ್ಲಿ ಫೋನ್ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಮೋಹನಕುಮಾರ್ ಹಾಗೂ ರಂಗಸ್ವಾಮಿ ನಡುವೆ ಫೋನ್ ಕರೆ ಮಾಡುವ ವಿಚಾರಕ್ಕೆ ಆರಂಭವಾದ ಜಗಳ, ಬಳಿಕ ಹೊಡೆದಾಟಕ್ಕೆ ತಿರುಗಿದೆ. ಜಗಳ ಬಿಡಿಸಲು ಮುಂದಾದ ಜೈಲು ಮುಖ್ಯ ವೀಕ್ಷಕರಾದ ಪರಶುರಾಮ ಹಾಗೂ ವೀರೇಶ್ ಸಂಗಮದ್ ಮೇಲೂ ಹಲ್ಲೆ ನಡೆದಿದೆ. ಪಿಸಿಎಸ್ ಕೊಠಡಿಗೆ ನುಗ್ಗಿದ ಒಂಬತ್ತು ಮಂದಿ ಕೈದಿಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ವೀರೇಶ್ ಸಂಗಮದ್ ಅವರು ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಶಿಧರ, ರಾಕೇಶ, ಯಲ್ಲಾಲಿಂಗ, ಆಕಾಶ, ಉಮೇಶ, ಸಾಯಿನಾಥ, ನಿರೂಪ್, ಭರತ ಹಾಗೂ ಚೇತನ್ ವಿರುದ್ಧ ಪ್ರಕರಣ ದಾಖಲಾಗಿದೆ. ಇವರೆಲ್ಲರೂ ರೌಡಿಶೀಟರ್ ಮಂಜೇಶ್ ಕೊಲೆ ಪ್ರಕರಣದ ಆರೋಪಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತು ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

