ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಚಿಕನ್ ಪೀಸ್ ವಿಚಾರಕ್ಕೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮದ್ಯಪಾನ ಮಾಡುತ್ತಿದ್ದ ವೇಳೆ “ನನಗಿಂತ ನೀನೇ ಹೆಚ್ಚು ಚಿಕನ್ ತಿನ್ನುತ್ತಿದ್ದೀಯಾ” ಎಂದು ಅರುಣಕುಮಾರ್ ಬಲಿಷ್ಟರ್ ಚವ್ಹಾಣ ಸ್ನೇಹಿತ ಸೀತಾರಾಮ್ ಚಂದ್ರದೇವ್ ಜೊತೆ ಜಗಳ ಮಾಡಿಕೊಂಡಿದ್ದಾನೆ. ಇಬ್ಬರೂ ‘ಪ್ರಿಯಾ ಸ್ಟೀಲ್ಸ್’ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿದ್ದು, ಆಗಸ್ಟ್ 23ರಂದು ರಾತ್ರಿ ಇತರ ಕಾರ್ಮಿಕರೊಂದಿಗೆ ಚಿಕನ್ ಅಡುಗೆ ಮಾಡಿ ಮದ್ಯಪಾನ ಮಾಡುತ್ತಿದ್ದರು. ಬಳಿಕ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಕೋಪಗೊಂಡ ಅರುಣಕುಮಾರ್ ಅಡುಗೆಗೆ ಬಳಸುತ್ತಿದ್ದ ಚಾಕುವಿನಿಂದ ಸೀತಾರಾಮ್‌ನ ಎದೆಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಸೀತಾರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅರುಣಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

