Breaking News

ಹಾಡಹಗಲೇ ಕಳವು: ಮನೆಯಿಂದ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿ ಎಸ್ಕೇಪ್

ಶಿವಮೊಗ್ಗದಲ್ಲಿ ಹಾಡಹಗಲೇ ಪಿಡಿಒ ದಂಪತಿಯ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳ, ಕೇವಲ 30 ನಿಮಿಷಗಳಲ್ಲಿ ₹1.42 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ದುಬಾರಿ ವಾಚ್‌ಗಳನ್ನು ದೋಚಿ ಪರಾರಿಯಾಗಿದ್ದಾನೆ. ಆಗಸ್ಟ್ 28ರಂದು ವಿದ್ಯಾನಗರದ 4ನೇ ಕ್ರಾಸ್‌ನಲ್ಲಿ ಘಟನೆ ನಡೆದಿದೆ. ದಂಪತಿ ಕರ್ತವ್ಯಕ್ಕೆ ತೆರಳಿದ್ದ ವೇಳೆ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳ, 943 ಗ್ರಾಂ ಚಿನ್ನಾಭರಣ, 500 ಗ್ರಾಂ ಬೆಳ್ಳಿ ವಸ್ತುಗಳು, 15 ದುಬಾರಿ ವಾಚ್‌ಗಳು ಹಾಗೂ ₹86 ಸಾವಿರ ನಗದು ಕದ್ದಿದ್ದಾನೆ. ದಂಪತಿಯ ಮಗಳು ಮನೆಗೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದೆ. ಕಳ್ಳನ ಚಲನವಲನ ಹಾಗೂ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *