Breaking News

IAS ಅಧಿಕಾರಿ ಜೊತೆ ಡೀಲ್, ಅಭ್ಯರ್ಥಿ ಟು ಕೋಟ್ಯಾಧಿಪತಿ: ಸಿಐಡಿ ಬಲೆಗೆ ಬಿದ್ದ ಬಸವರಾಜ್ ಕನ್ನಾಳೆಯ ಹಿನ್ನೆಲೆ ಇದು!

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದಲ್ಲಿ ಬಂಧಿತನಾಗಿರುವ ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಬಸವರಾಜ್ ಕನ್ನಾಳೆಯ ಹಿನ್ನೆಲೆ ಇದೀಗ ಹಲವು ರೋಚಕ ಸಂಗತಿಗಳನ್ನು ಬಯಲಿಗೆಳೆಯುತ್ತಿದೆ. ವರ್ಷಗಳ ಹಿಂದೆ ಸರ್ಕಾರಿ ಹುದ್ದೆ ಪಡೆಯಲು ಕೆಪಿಎಸ್‌ಸಿ ಪರೀಕ್ಷೆ ಬರೆಯಲು ಬೆಂಗಳೂರಿಗೆ ಬಂದಿದ್ದ ಆತ, ಬಳಿಕ ಅಕ್ರಮದ ಮಧ್ಯವರ್ತಿಯಾಗಿ ಕೋಟ್ಯಂತರ ರೂ. ಆಸ್ತಿ ಗಳಿಸಿದ್ದಾನೆ ಎನ್ನಲಾಗಿದೆ. ಕೆಪಿಎಸ್‌ಸಿ ವ್ಯವಸ್ಥೆಯ ಲೋಪದೋಷಗಳನ್ನು ಅರಿತುಕೊಂಡ ಬಳಿಕ ಅಭ್ಯರ್ಥಿಗಳಿಂದ ಹಣ ಪಡೆದು ಹುದ್ದೆ ಕೊಡಿಸುವ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ರಾಜಕೀಯ ನಾಯಕರು ಹಾಗೂ ಅಧಿಕಾರಿಗಳ ಸಂಪರ್ಕ ಬೆಳೆಸಿಕೊಂಡಿದ್ದ ಬಸವರಾಜ್, ಮಾಜಿ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರೊಂದಿಗೆ ಸಂಪರ್ಕ ಹೊಂದಿದ್ದನೆನ್ನಲಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಬಸವರಾಜ್‌ನನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ಭಾಲ್ಕಿಯ ಲೆಕ್ಚರ್ಸ್ ಕಾಲೋನಿ ಹಾಗೂ ದೋಣಗಾಪುರದಲ್ಲಿರುವ ಆತನ ಮನೆಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. 12ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಅಧಿಕಾರಿಗೆ ಪರಿಚಯಿಸಿ ಹಣದ ಡೀಲ್ ಕುದುರಿಸಿದ್ದಾನೆ ಎಂಬ ಆರೋಪದ ಕುರಿತು ಸಿಐಡಿ ತನಿಖೆ ತೀವ್ರಗೊಂಡಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *