ಉತ್ತರ ಕನ್ನಡದ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐಗಳ ಪೋಸ್ಟಿಂಗ್ ಹಾಗೂ ಲಂಚದ ವ್ಯವಹಾರದ ಕುರಿತು ಮಾತನಾಡಿರುವ ಆಡಿಯೋ ವೈರಲ್ ಆಗಿ ಭಾರೀ ಸಂಚಲನ ಸೃಷ್ಟಿಸಿತ್ತು. ಆಡಿಯೋದಲ್ಲಿ ಹಣದ ವ್ಯವಹಾರ, ಠಾಣೆ ಹಪ್ತಾ ಹಾಗೂ ‘ಮಂತ್ಲಿ’ ಮಾಮೂಲಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿತ್ತು. ಪ್ರಕರಣದ ತನಿಖೆಗೆ ಎಎಸ್‌ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ತನಿಖೆಯಲ್ಲಿ ಅಕ್ರಮ ಹಾಗೂ ಕರ್ತವ್ಯಲೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಪಿಎಸ್‌ಐಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಳಿಯಾಳ ಪಿಎಸ್‌ಐ ಕಿರಣ್ ಪಾಟೀಲ್, ಕ್ರೈಂ ಪಿಎಸ್‌ಐ ಕೃಷ್ಣ ಹಾಗೂ ಮಾಜಿ ಪಿಎಸ್‌ಐ ವಿನೋದ್ ರೆಡ್ಡಿ ಅವರನ್ನು ಉತ್ತರ ಕನ್ನಡ ಎಸ್‌ಪಿ ದೀಪನ್ ಎಂ.ಎನ್. ಅಮಾನತು ಮಾಡಿ ಆದೇಶಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

