Breaking News

ಚಲಿಸುವ ಬಸ್‌ನಲ್ಲೇ ಹತ್ತನೇ ಕ್ಲಾಸ್‌ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಬೆಚ್ಚಿಬಿದ್ದ ದೆಹಲಿ!

ದೆಹಲಿಯ ನೋಯ್ಡಾದಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವನಾಥ ಟ್ರಾವೆಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಚಾಲಕ ಕುಲದೀಪ್ ಮತ್ತು ಕಂಡಕ್ಟರ್ ಸಂದೀಪ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 4ರಂದು ಭಾರಿ ಮಳೆಯ ವೇಳೆ ಬಸ್‌ಗಾಗಿ ಕಾಯುತ್ತಿದ್ದ ಬಾಲಕಿಗೆ ಆರೋಪಿಗಳು ಸೆಕ್ಟರ್‌ 63 ಕಡೆಗೆ ಹೋಗುವುದಾಗಿ ಹೇಳಿ ಬಸ್‌ಗೆ ಹತ್ತಿಸಿಕೊಂಡಿದ್ದರು. ಇತರೆ ಪ್ರಯಾಣಿಕರು ಇಳಿದ ಬಳಿಕ ಬಸ್‌ನಲ್ಲಿ ಬಾಲಕಿ ಹಾಗೂ ಇಬ್ಬರು ಆರೋಪಿಗಳು ಮಾತ್ರ ಉಳಿದಿದ್ದು, ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಬಳಿಕ ಕಾಶ್ಮೀರ್ ಗೇಟ್‌ ಬಳಿಯ ರಿಂಗ್‌ ರೋಡ್‌ನಲ್ಲಿ ಬಾಲಕಿಯನ್ನು ಇಳಿಸಿ ಆರೋಪಿಗಳು ಪರಾರಿಯಾಗಿದ್ದರು. ಬಸ್‌ನ ಸೀಟ್‌ನಲ್ಲಿ ಬಾಲಕಿಯ ಕೂದಲು ಪತ್ತೆಯಾಗಿದ್ದು, ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಯುತ್ತಿದೆ. ಸದ್ಯ ಬಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *