Breaking News

ಚಾಕುವಿನಿಂದ ಇರಿದು ಅಣ್ಣನ ಕೊಲೆ ಮಾಡಿದ ತಮ್ಮ!

ಮಂಗಳೂರಿನ ಬಿಜೈ ಕೊಟ್ಟಾರ ಕ್ರಾಸ್ ಬಳಿ ಮೊಬೈಲ್ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬರು ತಮ್ಮನಿಂದಲೇ ಚಾಕುವಿನಿಂದ ಇರಿದು ಕೊಲೆಯಾಗಿದ್ದಾರೆ. ಮೃತರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದ್ದು, ಆರೋಪಿ ತಮ್ಮ ರಾಜು (36) ಎಂದು ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸಹೋದರರು ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ. ಭಾನುವಾರ ರಾತ್ರಿ 10.30ರಿಂದ 11 ಗಂಟೆ ನಡುವೆ ಮೊಬೈಲ್ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ರಾಜು ಅಣ್ಣನಿಗೆ ಚಾಕುವಿನಿಂದ ಇರಿದಿದ್ದಾನೆ. ತಾಯಿ ಮನೆಗೆ ಬಂದು ನೋಡಿದಾಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉರ್ವ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *