Breaking News

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನೇ ಸುಪಾರಿ ಕೊಟ್ಟು ಕೊಲ್ಲಿಸಿದ ಕಿರಾತಕ ಪತ್ನಿ, ಮೂವರು ಅರೆಸ್ಟ್!

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣೆಹಳ್ಳಿ ಹೊಸೂರು ಗ್ರಾಮದ ಬಸವರಾಜ್ (37) ಅವರನ್ನು ಪತ್ನಿ ಸುನೀತಾ ತನ್ನ ಪ್ರಿಯಕರ ತಿಪ್ಪೇಸ್ವಾಮಿ ಜೊತೆ ಸೇರಿ ಸುಪಾರಿ ನೀಡಿ ಕೊಲೆ ಮಾಡಿಸಿದ ಆರೋಪ ಕೇಳಿಬಂದಿದೆ. ಬಳಿಕ ಪತಿ ನಾಪತ್ತೆಯಾಗಿದ್ದಾನೆಂದು ಸುನೀತಾ ಪೊಲೀಸರಿಗೆ ದೂರು ನೀಡಿದ್ದಳು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದರಿಂದ ₹2 ಲಕ್ಷಕ್ಕೆ ಕೊಲೆ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಸಾಲ ಕೊಡಿಸುವುದಾಗಿ ನಂಬಿಸಿ ಬಸವರಾಜ್‌ನನ್ನು ಕಾರಿನಲ್ಲಿ ಕರೆದೊಯ್ದು ಮಾರ್ಗಮಧ್ಯೆ ಹತ್ಯೆ ಮಾಡಲಾಗಿದೆ. ನಾಪತ್ತೆ ಪ್ರಕರಣದ ತನಿಖೆ ನಡೆಸಿದ ಜಗಳೂರು ಪೊಲೀಸರು ತಾಂತ್ರಿಕ ಸಾಕ್ಷ್ಯ ಹಾಗೂ ಮೊಬೈಲ್ ಕರೆಗಳ ವಿವರ ಆಧರಿಸಿ ಕೊಲೆ ರಹಸ್ಯ ಬಯಲಿಗೆಳೆದಿದ್ದಾರೆ. ಪ್ರಕರಣದಲ್ಲಿ ಓಂಕಾರಪ್ಪನನ್ನು ವಶಕ್ಕೆ ಪಡೆಯಲಾಗಿದ್ದು, ಸುನೀತಾ ಹಾಗೂ ತಿಪ್ಪೇಸ್ವಾಮಿಗಾಗಿ ಶೋಧ ಮುಂದುವರಿದಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *