Breaking News

ಎರಡು ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟುಹಾಕಿದ ಭಗ್ನಪ್ರೇಮಿ

ಶಿವಮೊಗ್ಗದ ವೆಂಕಟೇಶನಗರದ 5ನೇ ಕ್ರಾಸ್‌ನಲ್ಲಿ ಭಗ್ನಪ್ರೇಮಿಯೊಬ್ಬ ಎರಡು ಬೈಕ್‌ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮಣಿ ಎಂಬ ಯುವಕ ಈ ಕೃತ್ಯ ಎಸಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣಿ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ದುಶ್ಚಟಗಳಿಗೆ ದಾಸನಾಗಿದ್ದ ಕಾರಣ ಯುವತಿ ಆತನನ್ನು ನಿರ್ಲಕ್ಷಿಸಿದ್ದಳು. ಇತ್ತೀಚೆಗೆ ಯುವತಿಗೆ ಅಂಥೋಣಿದಾಸ್ ಎಂಬಾತನೊಂದಿಗೆ ನಿಶ್ಚಿತಾರ್ಥವಾಗಿದ್ದರಿಂದ ಕೋಪಗೊಂಡ ಮಣಿ, ಅಂಥೋಣಿದಾಸ್ ಹಾಗೂ ಯುವತಿಯ ಸಹೋದರನ ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದಾನೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸರು ಆರೋಪಿ ಮಣಿಯನ್ನು ಬಂಧಿಸಿದ್ದಾರೆ. ಬೈಕ್‌ಗಳಿಗೆ ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *