ರಾಮನಗರದ ಶಾಂತಿಲಾಲ್ ಲೇಔಟ್‌ನ ನಿರ್ಮಾಣ ಹಂತದ ಮನೆಯೊಂದರಲ್ಲಿ ಅಕ್ರಮವಾಗಿ ಖೋಟಾ ನೋಟು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಐಜೂರು ಪೊಲೀಸರು ಭೇದಿಸಿದ್ದಾರೆ. ದಾಳಿ ವೇಳೆ ನಕಲಿ ನೋಟು ತಯಾರಿಸಲು ಬಳಸುತ್ತಿದ್ದ ಕಾಗದ, ಕೆಮಿಕಲ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಿಶೇಷ ಕಾಗದಕ್ಕೆ ಕೆಮಿಕಲ್ ಬಳಸಿ ₹200 ಹಾಗೂ ₹500 ಮುಖಬೆಲೆಯ ನಕಲಿ ನೋಟುಗಳನ್ನು ತಯಾರಿಸಲಾಗುತ್ತಿತ್ತು. ಬಳಿಕ ಅವುಗಳನ್ನು ಕತ್ತರಿಸಿ ಬಂಡಲ್‌ಗಳಾಗಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ SOCO ತಂಡ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಈ ಪ್ರಕರಣದಲ್ಲಿ ಸಂತೋಷ್, ಸಂಪತ್, ಗೋವಿಂದ್ ರಾಜ್, ರಾಜೇಶ್, ರೇಣುಕರಾಜ್, ಶಿವರಾಜ್ ಹಾಗೂ ಸತೀಶ್ ಸೇರಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ SP ರೋಹನ್ ಜಗದೀಶ್ ತಿಳಿಸಿದ್ದಾರೆ. ದಾಳಿ ವೇಳೆ ಸುಮಾರು ₹5 ಲಕ್ಷ ಮೌಲ್ಯದ 10 ಬಂಡಲ್ ಖೋಟಾ ನೋಟುಗಳು ಪತ್ತೆಯಾಗಿದ್ದು, ಜಾಲದ ಹಿಂದೆ ಇನ್ನೂ ಯಾರಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

