Breaking News

ಮೊಬೈಲ್‌ ಟವರ್ ಏರಿ ಪ್ರೇಯಸಿಯನ್ನು ಕರೆಸುವಂತೆ ಪಟ್ಟು ಹಿಡಿದ ಯುವಕ!

ಗಂಗಾವತಿಯಲ್ಲಿ ಪ್ರೇಯಸಿಯನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದು ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಹಣವಾಳ ಗ್ರಾಮದ ರಾಜಾ ಎಂಬ ಯುವಕ ಟವರ್ ಏರಿ ಎರಡು ಗಂಟೆಗೂ ಹೆಚ್ಚು ಕಾಲ ಆತಂಕ ಸೃಷ್ಟಿಸಿದ್ದಾನೆ. ದೇವದುರ್ಗ ಮೂಲದ ಯುವತಿಯನ್ನು ಪ್ರೀತಿಸುತ್ತಿರುವ ರಾಜಾ, ಆಕೆಯನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದಿದ್ದ. ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಸಾರ್ವಜನಿಕರು ಮನವೊಲಿಸಲು ಪ್ರಯತ್ನಿಸಿದರೂ ಆತ ಕೆಳಗಿಳಿಯದೆ ಟವರ್‌ನ ತುದಿಯಲ್ಲಿ ನಿಂತು, ಕುಳಿತು ಆತಂಕ ಮೂಡಿಸಿದ್ದಾನೆ. ನಿರಂತರ ಪ್ರಯತ್ನದ ಬಳಿಕ ಪೊಲೀಸರು ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದೇ ಯುವಕ ಭಾನುವಾರ ದೇವದುರ್ಗದಲ್ಲೂ ಮೊಬೈಲ್ ಟವರ್ ಏರಿ ಹೈಡ್ರಾಮಾ ಮಾಡಿದ್ದ ಎಂದು ತಿಳಿದುಬಂದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *