ಶಿವಮೊಗ್ಗದಲ್ಲಿ ಚೆನ್ನಾಗಿ ಓದುವಂತೆ ಪೋಷಕರು ನೀಡಿದ ಸಲಹೆಗೆ ಮನನೊಂದ 14 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಖಾಸಗಿ ವಿದ್ಯಾಸಂಸ್ಥೆಯಲ್ಲಿ 9ನೇ ತರಗತಿ ಓದುತ್ತಿದ್ದ ಸೃಷ್ಟಿ ಮೃತ ಬಾಲಕಿ. ತಂದೆ-ತಾಯಿ ದೇವಸ್ಥಾನದ ಪೂಜೆಗೆ ತೆರಳಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕಿ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಪೂಜೆ ಮುಗಿಸಿ ಪೋಷಕರು ಮನೆಗೆ ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಓದಿನ ಬಗ್ಗೆ ಪದೇಪದೇ ಒತ್ತಡ ನೀಡುತ್ತಿದ್ದ ಕಾರಣ ಈ ಹೆಜ್ಜೆ ಇಟ್ಟಿರುವುದಾಗಿ ಡೆತ್‌ನೋಟ್ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಕ್ಕಳ ಮೇಲೆ ವಿದ್ಯಾಭ್ಯಾಸದ ವಿಚಾರದಲ್ಲಿ ಅತಿಯಾದ ಒತ್ತಡ ಹೇರದಂತೆ ಈ ಘಟನೆ ಎಚ್ಚರಿಕೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

