ವರ್ಗಾವಣೆ ಡೀಲಿಂಗ್ ಹಾಗೂ ತಿಂಗಳ ಮಾಮೂಲಿ ವಿಚಾರದ ಆಡಿಯೋ ವೈರಲ್ ಆದ ಬೆನ್ನಲ್ಲೇ ಬೆಳ್ತಂಗಡಿ ಎಸ್‌ಐಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ವಿನೋದ್ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡದ ಹಳಿಯಾಳ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ವಿನೋದ್ ರೆಡ್ಡಿ ಬಳಿಕ ಮುಂಡಗೋಡ ಠಾಣೆಗೆ ವರ್ಗಾವಣೆಯಾಗಿದ್ದರು. ಆದರೆ ವಿಶೇಷ ತನಿಖಾ ದಳ ರಚನೆಯಾದ ಬಳಿಕ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ಎಸ್‌ಐಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಕನ್ನಡ ಜಿಲ್ಲಾ ಎಸ್‌ಪಿ ದೀಪನ್ ಎಂ.ಎನ್. ಅವರು ಪಿಎಸ್‌ಐಗಳಾದ ಕಿರಣ್ ಪಾಟೀಲ್, ಕೃಷ್ಟಾ ಅರಿಕೆರೆ ಹಾಗೂ ವಿನೋದ್ ರೆಡ್ಡಿ ಸೇರಿದಂತೆ ಮೂವರನ್ನು ಪ್ರಾಥಮಿಕ ತನಿಖೆ ಬಳಿಕ ಆಗಸ್ಟ್ 31ರಂದು ಅಮಾನತು ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

