ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ದಾದಾಪೀರ್‌ನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. 2015ರಲ್ಲಿ ನಡೆದ ಮಾರುತಿ ಹತ್ಯೆ ಪ್ರಕರಣದ ಹಳೆಯ ದ್ವೇಷವೇ ದಾದಾಪೀರ್ ಕೊಲೆಗೆ ಕಾರಣ ಎನ್ನಲಾಗಿದ್ದು, ಪೊಲೀಸರು ಒಟ್ಟು ಆರು ಮಂದಿಯನ್ನು ಬಂಧಿಸಿದ್ದಾರೆ. ದಾದಾಪೀರ್ ಸಣ್ಣ ಪ್ರಮಾಣದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದನು. 2015ರ ಮಾರುತಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳೂ ದಾಖಲಾಗಿದ್ದವು ಎನ್ನಲಾಗಿದೆ. ಮಾರುತಿಯ ತಾಯಿಯೇ ಹತ್ಯೆ ಸಂಚಿನ ಪ್ರಮುಖ ಆರೋಪಿಯಾಗಿದ್ದು, ಮಕ್ಕಳನ್ನು ಪ್ರಚೋದಿಸಿ ದಾದಾಪೀರ್ ಹತ್ಯೆ ಮಾಡಿಸಿರುವ ಆರೋಪ ಕೇಳಿಬಂದಿದೆ. ಹತ್ಯೆಯ ಬಳಿಕ ಆರೋಪಿಗಳು ಧರ್ಮಸ್ಥಳಕ್ಕೆ ತೆರಳಿ ಮುಡಿಕೊಟ್ಟಿದ್ದರು ಎನ್ನಲಾಗಿದೆ. ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು, ಹಳೆಯ ದ್ವೇಷ, ಹತ್ಯೆಯ ಸಂಚು ಹಾಗೂ ಕೃತ್ಯದಲ್ಲಿ ಭಾಗಿಯಾದವರ ಕುರಿತು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

