Breaking News

ಕರ್ತವ್ಯಲೋಪ, 1.5 ಕೋಟಿ ರೂ. ದುರ್ಬಳಕೆ ಆರೋಪ: ಪಿಡಿಒ ಅಮಾನತು

ಮಂಡ್ಯ: ಕರ್ತವ್ಯಲೋಪ ಹಾಗೂ ₹1.5 ಕೋಟಿಗೂ ಅಧಿಕ ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಮದ್ದೂರು ತಾಲೂಕಿನ ಆತಗೂರು ಗ್ರಾಮ ಪಂಚಾಯಿತಿ ಪಿಡಿಒ ಶಶಿಧರ್ ಅವರನ್ನು ಅಮಾನತು ಮಾಡಲಾಗಿದೆ. ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಅಮಾನತು ಆದೇಶ ಹೊರಡಿಸಿದ್ದಾರೆ.bಆತಗೂರು ಹಾಗೂ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 15ನೇ ಹಣಕಾಸು ಯೋಜನೆಯ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ದೂರು ಆಧರಿಸಿ ಜಿಲ್ಲಾ ಪಂಚಾಯಿತಿ ಸಿಇಒ ತನಿಖಾ ತಂಡ ರಚಿಸಿದ್ದು, ಡಿಸಿ ಬಿಲ್‌ಗಳ ಕಡತ ಪರಿಶೀಲನೆ ವೇಳೆ ಹಲವು ಲೋಪಗಳು ಕಂಡುಬಂದಿರುವುದು ವರದಿಯಲ್ಲಿ ಉಲ್ಲೇಖವಾಗಿದೆ.bತನಿಖೆ ಪೂರ್ಣಗೊಂಡ ಬಳಿಕ ಇಲಾಖೆ ವಿಚಾರಣೆ ಬಾಕಿ ಇರಿಸಿ ಶಶಿಧರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಹಿಂದೆಯೂ ಹಲಗೂರು ಪಿಡಿಒ ಆಗಿದ್ದ ವೇಳೆ ಹಣ ದುರ್ಬಳಕೆ ಆರೋಪದಡಿ ಅವರು ಅಮಾನತುಗೊಂಡಿದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *