Breaking News

ರಾಜ್ಯದಲ್ಲಿ ಖೋಟಾ ನೋಟು ತಯಾರಿಕಾ ಜಾಲ ಪತ್ತೆ : ರಾಮನಗರದಲ್ಲಿ 7 ಆರೋಪಿಗಳು ಅರೆಸ್ಟ್!

ರಾಮನಗರ: ಜೀಗೇನಹಳ್ಳಿ ಬಡಾವಣೆಯ ನಿರ್ಮಾಣ ಹಂತದ ಮನೆಯೊಂದರಲ್ಲಿ ಅಕ್ರಮವಾಗಿ ನಕಲಿ ನೋಟು ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಐಜೂರು ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಸಂತೋಷ್, ಸಂಪತ್, ಗೋವಿಂದರಾಜ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹5 ಲಕ್ಷ ಮೌಲ್ಯದ ತಯಾರಿಕಾ ಹಂತದ ನಕಲಿ ನೋಟುಗಳ ಪೇಪರ್ ಬಂಡಲ್‌ಗಳು ಹಾಗೂ ನೋಟು ಮುದ್ರಣಕ್ಕೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ದಂಧೆಯ ಹಿಂದೆ ಹೊರರಾಜ್ಯದ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಅವರ ಮಾರ್ಗದರ್ಶನದಲ್ಲಿ ಆರೋಪಿಗಳು ಕೃತ್ಯ ನಡೆಸುತ್ತಿದ್ದರು ಎನ್ನಲಾಗಿದ್ದು, ಜಾಲದ ಮೂಲ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *