KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಪಶುವೈದ್ಯಾಧಿಕಾರಿ ಹುದ್ದೆಯ ಬಳಿಕ ಇದೀಗ DySP ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಹಾಗೂ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧಿತರಾಗಿದ್ದು, ಸಿಐಡಿ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಕನ್ನಾಳೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯ ಅಭ್ಯರ್ಥಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಾಹಿತಿ ಹೊರಬಂದಿದೆ ಎನ್ನಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳೊಂದಿಗೆ ಕನ್ನಾಳೆ ತೆಗೆಸಿಕೊಂಡಿದ್ದ ಫೋಟೋಗಳು ಸಿಐಡಿ ಕೈ ಸೇರಿವೆ. ಪಶುವೈದ್ಯಾಧಿಕಾರಿ ಹುದ್ದೆಯಿಂದ ಗೆಜೆಟೆಡ್ ಹುದ್ದೆಗಳವರೆಗೆ ಬ್ರೋಕರ್ ಜಾಲ ವಿಸ್ತರಿಸಿತ್ತೇ ಎಂಬ ಬಗ್ಗೆ ಸಿಐಡಿ ತನಿಖೆ ತೀವ್ರಗೊಳಿಸಿದೆ. ಪ್ರಕರಣದಲ್ಲಿ ಇನ್ನಷ್ಟು ಪ್ರಭಾವಿಗಳು ಹಾಗೂ ಅಕ್ರಮವಾಗಿ ಹುದ್ದೆ ಪಡೆದ ಅಭ್ಯರ್ಥಿಗಳ ಹೆಸರುಗಳು ಹೊರಬರುವ ಸಾಧ್ಯತೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

