Breaking News

ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ಕಿಡ್ನಾಪ್ ಕೇಸ್, ಸಹಪಾಠಿಯನ್ನು ಅಪಹರಿಸಿ ಕಾರಲ್ಲಿ ಹಲ್ಲೆಆರೋಪ!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಅವರ ಪುತ್ರನ ವಿರುದ್ಧ ಸಹಪಾಠಿ ವಿದ್ಯಾರ್ಥಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಕಾರು ಓವರ್‌ಟೇಕ್ ಮಾಡಿದ ವಿಚಾರಕ್ಕೆ ಆರಂಭವಾದ ಗಲಾಟೆ ಬಳಿಕ ಗಂಭೀರ ಸ್ವರೂಪ ಪಡೆದಿದೆ ಎನ್ನಲಾಗಿದೆ. ಮೈಸೂರು ರಸ್ತೆಯ ಆರ್‌ವಿ ಯೂನಿವರ್ಸಿಟಿ ಆವರಣದ ಹೊರಗೆ ವಿದ್ಯಾರ್ಥಿಯನ್ನು ವಿಜಯ್ ಪುತ್ರ ಹಾಗೂ ಆತನ ಸ್ನೇಹಿತರು ಕಾರಿನಲ್ಲಿ ಎಳೆದೊಯ್ದು, ಚಲಿಸುತ್ತಿದ್ದ ಕಾರಿನಲ್ಲೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಗಾಯಾಳು ವಿದ್ಯಾರ್ಥಿ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಿಜಯ್ ಪುತ್ರ ಹಾಗೂ ಆತನ ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಬ್ಬರೂ ಆರ್‌ವಿ ಯೂನಿವರ್ಸಿಟಿಯ ಸಹಪಾಠಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *