Breaking News

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಉಪ ತಹಶೀಲ್ದಾರ್ ಗೆ 4 ವರ್ಷ ಜೈಲು, 40 ಸಾವಿರ ರೂ. ದಂಡ

ಶಿವಮೊಗ್ಗ: ಅಂಗವಿಕಲರ ಪಿಂಚಣಿ ಕೊಡಿಸಲು ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಬಲೆಗೆ ಬಿದ್ದಿದ್ದ ಭದ್ರಾವತಿ ತಾಲೂಕಿನ ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿದೆ. ತಮ್ಮ ಹುಟ್ಟು ಮೂಕ ತಂದೆಗೆ ಅಂಗವಿಕಲರ ಪಿಂಚಣಿ ಸೌಲಭ್ಯ ಕೊಡಿಸಲು ಗಿರೀಶ್‌ ಎಂಬುವರು ನಾಡಕಚೇರಿಗೆ ತೆರಳಿದ್ದರು. ಈ ವೇಳೆ ಪುಷ್ಪಲತಾ ₹10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ ₹5 ಸಾವಿರ ಪಡೆಯುತ್ತಿದ್ದಾಗ 2017ರ ಸೆ.21ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ಬಳಿಕ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು ಸೆ.1, 2026ರಂದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ. ಸರ್ಕಾರದ ಪರ ವಿಶೇಷ ಸಾರ್ವಜನಿಕ ಅಭಿಯೋಜಕ ಸುಂದರ್‌ ರಾಜ್‌ ವಾದ ಮಂಡಿಸಿದ್ದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *