Breaking News

ಸಿಗರೇಟ್​​​​ಗಾಗಿ ನಡೆದ ಕೊಲೆ ಕೇಸ್​, 8 ಮಂದಿಗೆ ಜೀವಾವಧಿ ಶಿಕ್ಷೆ!

ಬೆಂಗಳೂರು: ಸಿಗರೇಟ್ ಸೇದುವ ವಿಚಾರಕ್ಕೆ 2017ರಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹರೀಶ್ ಎಂಬ ಯುವಕನ ಮೇಲೆ ಆರೋಪಿಗಳ ಗುಂಪು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ 13 ಮಂದಿಯನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ 59ನೇ ಸಿಸಿಎಚ್ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಎಂಟು ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ. ವೆಂಕಟೇಶ್, ವಿಜಯ್, ವಿನೋದ್, ಜೆರಾಲ್ಡ್ ಆರೋಗ್ಯ ರಾಜ್, ಜೇಮ್ಸ್ ಕುಮಾರ್, ಕಿರಣ್, ವಿಕ್ರಮ್ ಹಾಗೂ ಮತ್ತೋರ್ವ ವಿಜಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೂವರು ಅಪ್ರಾಪ್ತರ ವಿಚಾರವನ್ನು ಪ್ರತ್ಯೇಕವಾಗಿ ಪರಿಗಣಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *