Breaking News

ನಿಶ್ಚಿತಾರ್ಥದ ಸಿಟ್ಟಿಗೆ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪಿ ಬಂಧನ

ಶಿವಮೊಗ್ಗ: ಯುವತಿ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಆಕ್ರೋಶಗೊಂಡ ಪ್ರಿಯಕರ, ಆಕೆಯ ಭಾವಿ ಪತಿ ಹಾಗೂ ಸಹೋದರನ ಎರಡು ಬೈಕ್‌ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ವೆಂಕಟೇಶನಗರದಲ್ಲಿ ನಡೆದಿದೆ. ಆರೋಪಿ ಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಣಿ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆತನ ದುಶ್ಚಟಗಳಿಂದಾಗಿ ಯುವತಿ ದೂರವಾಗಿದ್ದಳು. ಬಳಿಕ ಕುಟುಂಬಸ್ಥರು ಆಕೆಗೆ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಕೋಪಗೊಂಡ ಮಣಿ ಮಧ್ಯರಾತ್ರಿ ಯುವತಿಯ ಮನೆ ಬಳಿ ತೆರಳಿ ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಕೃತ್ಯದ ದೃಶ್ಯಗಳು ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *