ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ತಾಯಿ ತನ್ನಿಬ್ಬರು ಅವಳಿ ಹೆಣ್ಣು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ನಡೆದಿದೆ. ಮಕ್ಕಳ ತಾಯಿ ಉಮಾದೇವಿ (42) ಅವರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಹಾಗೂ ಮಾನಸಿಕ ತಪಾಸಣೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ. ದೀರ್ಘಕಾಲ ಮಕ್ಕಳಿಗಾಗಿ ಕಾಯುತ್ತಿದ್ದ ದಂಪತಿಗೆ IVF ಮೂಲಕ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು. ಆದರೆ ಹೆರಿಗೆಯ ಬಳಿಕ ಉಮಾದೇವಿ ಅವರ ಮಾನಸಿಕ ಸ್ಥಿತಿ ಹದಗೆಟ್ಟಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಕ್ಕಳನ್ನು ಕೊಂದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದು, ಕೆಲಸ ಮುಗಿಸಿ ಮನೆಗೆ ಬಂದ ಪತಿ ಪತ್ನಿಯನ್ನು ರಕ್ಷಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಇಬ್ಬರು ಕಂದಮ್ಮಗಳು ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪತಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆರಿಗೆಯ ನಂತರ ಉಂಟಾದ ಮಾನಸಿಕ ಸಮಸ್ಯೆ ಅಥವಾ ಖಿನ್ನತೆ ಘಟನೆಗೆ ಕಾರಣವಾಗಿದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

