ಬೆಂಗಳೂರು: ಸಣ್ಣ ಓವರ್‌ಟೇಕ್ ವಿಚಾರಕ್ಕೆ ಆರಂಭವಾದ ಗಲಾಟೆ ಕಾಲೇಜು ವಿದ್ಯಾರ್ಥಿಯ ಅಪಹರಣ ಹಾಗೂ ಹಲ್ಲೆ ಪ್ರಕರಣವಾಗಿ ತಿರುಗಿದೆ. ನಟ ದುನಿಯಾ ವಿಜಯ್ ಅವರ ಪುತ್ರ ಹಾಗೂ ಆತನ ಸ್ನೇಹಿತರ ವಿರುದ್ಧ ವಿದ್ಯಾರ್ಥಿಯೊಬ್ಬನನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಓವರ್‌ಟೇಕ್ ವಿಚಾರವಾಗಿ ವಿದ್ಯಾರ್ಥಿ ಹಾಗೂ ಆರೋಪಿಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಮರುದಿನ ಮೈಸೂರು ರಸ್ತೆಯ ಆರ್‌ವಿ ಯೂನಿವರ್ಸಿಟಿ ಬಳಿ ವಿದ್ಯಾರ್ಥಿಯನ್ನು ಕಾರಿಗೆ ಎಳೆದುಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

