Breaking News

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಗರದ ಪ್ರೆಸ್‌ಕ್ಲಬ್ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ ಅಪರಾಹ್ನ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದಾಗ, ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ. ಪೊಲೀಸರು ತಿಳುವಳಿಕೆ ನೀಡಿದರೂ ಗಲಾಟೆ ಮುಂದುವರಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂಡೂರು ಗ್ರಾಮದ ಪ್ರವೀಣ್ ಆಚಾರ್ಯ, ಕೂರ್ನಡ್ಕದ ರವೂಫ್ ಹಾಗೂ ಬೋಳ್ವಾರದ ಹಕೀಂ ಸೇರಿದಂತೆ ಇತರರ ವಿರುದ್ಧ ಅ.ಕ್ರ. 104/2026ರಂತೆ BNS ಕಲಂ 194(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *