Breaking News

ಬೆಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ – 1.07 ಕೋಟಿ ರೂ. ಮೌಲ್ಯದ ಗಾಂಜಾ ವಶ!

ಬೆಂಗಳೂರು: ಥೈಲ್ಯಾಂಡ್‌ನ ಫುಕೆಟ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನೊಬ್ಬನಿಂದ ಸುಮಾರು ₹1.07 ಕೋಟಿ ಮೌಲ್ಯದ 3.05 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರೋಪಿ ತನ್ನ ಚೆಕ್‌ಇನ್ ಬ್ಯಾಗೇಜ್‌ನಲ್ಲಿ ಗಾಂಜಾವನ್ನು ಸೂಕ್ಷ್ಮವಾಗಿ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಎನ್ನಲಾಗಿದೆ. ತಪಾಸಣೆ ವೇಳೆ ಮಾದಕ ವಸ್ತು ಪತ್ತೆಯಾಗಿದ್ದು, ಕಸ್ಟಮ್ಸ್ ಕಾಯ್ದೆ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಗಾಂಜಾವನ್ನು ನಗರದಲ್ಲಿ ಯಾರಿಗೆ ತಲುಪಿಸಲು ತರಲಾಗಿತ್ತು ಹಾಗೂ ಇದರ ಹಿಂದೆ ಇರುವ ಪ್ರಮುಖ ಆರೋಪಿಗಳು ಯಾರು ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *