Breaking News

ಪೊಲೀಸ್ ಅಧಿಕಾರಿಗಳ ವಿರುದ್ಧ ಹಣ ವಂಚನೆ ಆರೋಪ – ಲೈವ್‌ನಲ್ಲಿ ಆತ್ಮಹತ್ಯೆ ಯತ್ನ

ಹಾಸನ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಆರೋಪ ಮಾಡಿರುವ ಅಮರ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಲೈವ್ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ಕೊಡುವಿನ ಹೊಸಹಳ್ಳಿ ನಿವಾಸಿಯಾಗಿರುವ ಅಮರ್, ಬೆಟ್ಟದಪುರ ಠಾಣೆ ಸಿಬ್ಬಂದಿ ವಿರುದ್ಧ ಆರೋಪ ಮಾಡಿದ್ದಾರೆ. ಅಪಘಾತ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ಪರವಾಗಿ ವರ್ತಿಸಿ, ತಮಗೆ ನ್ಯಾಯ ಒದಗಿಸದೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಅಮರ್ ಆರೋಪಿಸಿದ್ದಾರೆ. ತಮ್ಮ ಸಾವಿಗೆ ಹುಣಸೂರು ಡಿವೈಎಸ್ಪಿ ರವೀಶ್ ಸೇರಿದಂತೆ ಕೆಲ ಅಧಿಕಾರಿಗಳು ಕಾರಣ ಎಂದು ಲೈವ್ ವಿಡಿಯೋದಲ್ಲಿ ಹೇಳಿದ್ದಾರೆ. ಲೈವ್‌ನಲ್ಲೇ ವಿಷ ಸೇವಿಸಿದ ಅಮರ್ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸ್ ಅಧಿಕಾರಿಗಳ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಯಬೇಕಿದೆ.

Share News

About BigTv News

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *