Breaking News

ಮದುವೆ ವಿಚಾರಕ್ಕೆ ವ್ಯಕ್ತಿಯ ಮೇಲೆ ದೊಣ್ಣೆ, ಬಾಟಲಿಯಿಂದ ಹಲ್ಲೆ ನಡೆಸಿದ್ದ ಶಿಕ್ಷಕಿಗೆ ಜೈಲು ಶಿಕ್ಷೆ!

ಶಿವಮೊಗ್ಗದಲ್ಲಿ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ದೊಣ್ಣೆ ಹಾಗೂ ಗಾಜಿನ ಬಾಟಲಿಯಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಮಲವಗೊಪ್ಪ ನಿವಾಸಿ ನಸೀನಾ ಬಾನು ಶಿಕ್ಷೆಗೆ ಗುರಿಯಾದವರು. ಸಕ್ರೀಯ ಅವರ ಕಿರಿಯ ಸಹೋದರಿಯ ವಿವಾಹ ವಿಚಾರದಲ್ಲಿ ನಸೀನಾ ಬಾನು ಹಾಗೂ ಮತ್ತೊಬ್ಬ ವ್ಯಕ್ತಿ ತಕರಾರು ತೆಗೆದಿದ್ದರು. ಮಾತಿಗೆ ಮಾತು ಬೆಳೆದು ಸಕ್ರೀಯ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದರು. ಈ ಬಗ್ಗೆ ತುಂಗಾನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಸಿಜೆ ಮತ್ತು ಸಿಜೆಎಂ ನ್ಯಾಯಾಲಯವು ಸಾಕ್ಷ್ಯಾಧಾರಗಳ ಆಧಾರದ ಮೇಲೆ IPC 323, 324 ಹಾಗೂ 506ರಡಿ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ ನಸೀನಾ ಬಾನು ಅವರಿಗೆ ಜೈಲು ಶಿಕ್ಷೆ ವಿಧಿಸಿದೆ.

Share News

About BigTv News

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *