Breaking News

16 ಗಂಭೀರ ಪ್ರಕರಣಗಳ ಖತರ್ನಾಕ್ ಆರೋಪಿ ಬಂಧನ; ಕೆರೆಗೆ ಧುಮುಕಿ ಹೆಡೆಮುರಿಕಟ್ಟಿದ ಭದ್ರಾವತಿ ಪೊಲೀಸರು!

ಶಿವಮೊಗ್ಗ: ಕಳ್ಳತನ, ಕೊಲೆ ಯತ್ನ ಸೇರಿದಂತೆ 16 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯಕ್ಕೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ದಿಲೀಪ ಅಲಿಯಾಸ್ ಕರಿಯಾ ಎಂಬ ಆರೋಪಿಯನ್ನು ಭದ್ರಾವತಿ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಮೂರು ಬಾರಿ ಜಾಮೀನು ರಹಿತ ವಾರಂಟ್‌ ಜಾರಿಯಾಗಿದ್ದರೂ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಪೊಲೀಸರು ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಕೆರೆಗೆ ಹಾರಿ ನೀರಿನಲ್ಲಿ ಅಡಗಿ ಕುಳಿತಿದ್ದಾನೆ. ಆರೋಪಿಯ ಸುಳಿವು ಪತ್ತೆಹಚ್ಚಿದ ಬಳಿಕ ಪಿಎಸ್‌ಐಗಳಾದ ರಮೇಶ್ ಹಾಗೂ ಪ್ರಸನ್ನ ಅವರು ಜೀವದ ಹಂಗು ತೊರೆದು ಕೆರೆಗೆ ಧುಮುಕಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಸಾಹಸಮಯ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *