ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್‌ನ ಅಗರ ಕೆರೆ ಆವರಣದಲ್ಲಿ ಜಾಗಿಂಗ್ ಮಾಡುತ್ತಿದ್ದ ಮಹಿಳೆಯರಿಗೆ ತಿಳಿಯದಂತೆ ಮೊಬೈಲ್‌ನಲ್ಲಿ ವಿಡಿಯೋ ಹಾಗೂ ಫೋಟೋ ಸೆರೆಹಿಡಿಯುತ್ತಿದ್ದ ಆರೋಪದಡಿ ಗೊಲ್ಡನ್ ಕುಮಾರ್ ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಅನುಮಾನಾಸ್ಪದ ವರ್ತನೆ ಗಮನಿಸಿದ ಮಹಿಳೆಯರು ಆತನನ್ನು ತಡೆದು ಪ್ರಶ್ನಿಸಿದ್ದು, ಮೊಬೈಲ್ ಪರಿಶೀಲಿಸಿದಾಗ ಹಲವು ಮಹಿಳೆಯರ ವಿಡಿಯೋಗಳು ಪತ್ತೆಯಾಗಿವೆ. ಬಳಿಕ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮೊಬೈಲ್ ಜಪ್ತಿ ಮಾಡಿದ್ದಾರೆ. ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

