Breaking News

ಮೈಸೂರಿನಲ್ಲಿ ಮತ್ತೊಂದು ‘ಗೋಲ್ಡ್ ಸ್ಕ್ಯಾಮ್’: ಮೋಹನ್ ಜ್ಯುವೆಲರಿಯಿಂದ ನೂರಾರು ಗ್ರಾಹಕರಿಗೆ ಮೋಸ

ಮೈಸೂರಿನ ವಿವೇಕಾನಂದ ವೃತ್ತದಲ್ಲಿರುವ ‘ಮೋಹನ್ ಜ್ಯುವೆಲರಿ’ ಮಾಲೀಕ ಮೋಹನ್ ಲಾಲ್, ಚಿನ್ನ ನೀಡುವುದಾಗಿ ನಂಬಿಸಿ ಮಾಸಿಕ ಕಂತುಗಳ ಮೂಲಕ 80ಕ್ಕೂ ಹೆಚ್ಚು ಗ್ರಾಹಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿರುವ ಆರೋಪ ಕೇಳಿಬಂದಿದೆ. ಕಳೆದ ಎರಡು ಕಂತು ಯೋಜನೆಗಳಲ್ಲಿ ಸಮಯಕ್ಕೆ ಸರಿಯಾಗಿ ಚಿನ್ನ ನೀಡಿದ್ದರಿಂದ ಗ್ರಾಹಕರ ವಿಶ್ವಾಸ ಗಳಿಸಿದ್ದ ಎನ್ನಲಾಗಿದೆ. ಆದರೆ, ಈ ಬಾರಿ ಕಳೆದ ಒಂದು ವಾರದಿಂದ ಅಂಗಡಿ ಬಾಗಿಲು ಮುಚ್ಚಿದ್ದು, ಮೋಹನ್ ಲಾಲ್ ಕೂಡ ನಾಪತ್ತೆಯಾಗಿದ್ದ. ಮನೆಯೂ ಖಾಲಿಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಹಕರು ಅಂಗಡಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕುವೆಂಪುನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಗ್ರಾಹಕರ ದೂರಿನ ಆಧಾರದ ಮೇಲೆ ಪೊಲೀಸರು ಮೋಹನ್ ಲಾಲ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಎಷ್ಟು ಮೊತ್ತದ ಹಣ ವಂಚನೆಯಾಗಿದೆ ಹಾಗೂ ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *