ಕಾಸರಗೋಡು: ಯುವಕನನ್ನು ಅಪಹರಿಸಿ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಅಪ್ರಾಪ್ತ ಬಾಲಕಿಯೊಂದಿಗೆ ಅರೆನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿ ₹1.02 ಲಕ್ಷ ದೋಚಿದ ಆರೋಪದಡಿ ಬದಿಯಡ್ಕ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸೇರಾಜೆ ನಿವಾಸಿ ಎ.ಎಸ್. ಸುಜಿತ್ ದೂರು ನೀಡಿದ್ದಾರೆ. ಆ.29ರಂದು ತನ್ನನ್ನು ಕಾರಿನಲ್ಲಿ ಅಪಹರಿಸಿ ಕೊಠಡಿಯಲ್ಲಿ ಬಂಧಿಸಿಟ್ಟ ಆರೋಪಿಗಳು, ಅಪ್ರಾಪ್ತ ಬಾಲಕಿಯೊಂದಿಗೆ ಅರೆನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ₹1,02,000 ನಗದು ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಬದಿಯಡ್ಕ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

