ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ..
ನಿನ್ನೆ ಬ್ರೇಕ್ ಮಾಡಿದ ಸುದ್ದಿ ಇಂದು ಸಾಕಾರ! ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ!
ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್‌ಗೆ ನೂತನ ಕಮಿಷನರ್ ಆಗಿ ಬೋರ್ಸೆ ಭೂಷಣ್ ಗುಲಾಬರಾವ್, IPS ನೇಮಕಗೊಂಡಿರುವ ಸುದ್ದಿ ನಿನ್ನೆ ಭಾರೀ ಗಮನ ಸೆಳೆದಿತ್ತು. ಇದೀಗ ಆ ಸುದ್ದಿಗೆ ಮತ್ತೊಂದು ಮಹತ್ವದ ಅಪ್‌ಡೇಟ್ ಸಿಕ್ಕಿದೆ. ಇಂದು ಮಧ್ಯಾಹ್ನ 1:30ರಿಂದ 2 ಗಂಟೆಯೊಳಗೆ ನೂತನ ಕಮಿಷನರ್ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಲಾಗಿದೆ….

ಹುಬ್ಬಳ್ಳಿಗೆ ಆಗಮಿಸಿದ ಬಳಿಕ ಅಧಿಕಾರ ಸ್ವೀಕಾರ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆ ನಡೆಯುವ ಸಾಧ್ಯತೆ ಇದೆ…
ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಡ್ರಗ್ಸ್ ಜಾಲ, ಸೈಬರ್ ಕ್ರೈಂ ಹಾಗೂ ಸಂಚಾರ ಸಮಸ್ಯೆಗಳ ಮೇಲೆ ನೂತನ ಕಮಿಷನರ್ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬ ಕುತೂಹಲ ಇದೀಗ ಹೆಚ್ಚಾಗಿದೆ…ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಹುಬ್ಬಳ್ಳಿ–ಧಾರವಾಡ ಖಾಕಿ ಪಡೆಗೆ ಹೊಸ ಸಾರಥಿ….
bigtvnews | Hubli Dharwad News | Kannada News | Karnataka News Hubli News | News In Hubli | Local news

