Breaking News

ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ: ದಾವಣಗೆರೆ ಟೀಮ್ ಅಕಾಡೆಮಿ ವಿರುದ್ಧ ದೂರು ದಾಖಲಿಸಿದ ಪೋಷಕರು

ದಾವಣಗೆರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಳನ್ನು ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ 17 ವರ್ಷದ ರಂಜಿತಾ ಎಂದು ಗುರುತಿಸಲಾಗಿದೆ. ಸೆ.2ರ ರಾತ್ರಿ ಹಾಸ್ಟೆಲ್ ಕೊಠಡಿಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ರಂಜಿತಾ ಕಳೆದ ಒಂದೂವರೆ ವರ್ಷದಿಂದ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಘಟನೆಗೆ ಸಂಬಂಧಿಸಿ ಪೋಷಕರು ಕಾಲೇಜು ಆಡಳಿತದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಮಗಳಿಗೆ ಹೊಡೆದು ಕೊಲೆ ಮಾಡಿ ಬಳಿಕ ನೇಣು ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *