Breaking News

ಐಪಿಎಸ್‌ ಅಧಿಕಾರಿ ಮೇಲೆ ಗೂಂಡಾವರ್ತನೆ: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್

ಬೆಂಗಳೂರು: ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಉತ್ತರ ವಿಭಾಗದ ಡಿಸಿಪಿ ನೇಮಗೌಡ ಅವರನ್ನು ಹಿಡಿದು ತಳ್ಳಾಡಿದ ಆರೋಪದ ಮೇರೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ.31ರಂದು ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಈ ಸಂದರ್ಭ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್‌.ಎಸ್‌. ಮಂಜುನಾಥ್‌ ಗೌಡ ಅವರು ಡಿಸಿಪಿ ನೇಮಗೌಡ ಅವರೊಂದಿಗೆ ತಳ್ಳಾಟ ನಡೆಸಿರುವ ದೃಶ್ಯ ವೈರಲ್ ಆಗಿದೆ. ಪ್ರಕರಣದಲ್ಲಿ ಯಾವುದೇ ಕಾರ್ಯಕರ್ತರ ಹೆಸರನ್ನು ಉಲ್ಲೇಖಿಸದೆ ‘ಯುವ ಕಾಂಗ್ರೆಸ್ ಕಾರ್ಯಕರ್ತರು’ ಎಂದು ದಾಖಲಿಸಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *