ಮೂಡುಬಿದಿರೆ: ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡರೊಬ್ಬರು ಸೇರಿ ಮೂವರ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಕೆಫೆಗೆ ತೆರಳಿದ್ದ ವೇಳೆ ಆರೋಪಿಗಳು ಅಕ್ರಮವಾಗಿ ಒಳನುಗ್ಗಿ ಅವರ ಹೆಸರು ಕೇಳಿ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗಳು ದೂರು ನೀಡಲು ಹೆದರಿದ್ದ ಹಿನ್ನೆಲೆಯಲ್ಲಿ ಪಿಎಸ್ಸೈ ಪ್ರತಿಭಾ ನೀಡಿರು ಅವರ ದೂರಿನ ಆಧಾರದ ಮೇಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಬಿಎನ್ಎಸ್ನ ವಿವಿಧ ಸೆಕ್ಷನ್ಗಳಡಿ ಕೇಸ್ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

