Breaking News

ಬಗೆದಷ್ಟೂ ಬಯಲಾಗ್ತಿದೆ KPSC ಕರ್ಮಕಾಂಡ: ಕನ್ನಾಳೆ ಮನೆಯಲ್ಲಿ 15 ಗ್ರೂಪ್ B ಹಾಲ್ ಟಿಕೆಟ್ ಪತ್ತೆ! KAS ಪರೀಕ್ಷೆಗಳಲ್ಲೂ ಅಕ್ರಮ?

ಕೆಪಿಎಸ್‌ಸಿ ಭ್ರಷ್ಟಾಚಾರ ಪ್ರಕರಣದ ಆರೋಪಿ ಬಸವರಾಜ್ ಕನ್ನಾಳೆ ಮನೆ ಮೇಲೆ ಸಿಐಡಿ ನಡೆಸಿದ ಶೋಧದಲ್ಲಿ 15 ಗ್ರೂಪ್‌-ಬಿ ಪರೀಕ್ಷೆಗಳ ಹಾಲ್‌ಟಿಕೆಟ್‌ಗಳು ಪತ್ತೆಯಾಗಿವೆ. ಇದರಿಂದ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದ ಜೊತೆಗೆ ಗ್ರೂಪ್‌-ಬಿ ಹಾಗೂ ಕೆಎಎಸ್‌ ಪರೀಕ್ಷೆಗಳಲ್ಲೂ ಪ್ರಶ್ನೆಪತ್ರಿಕೆ ಡೀಲ್ ನಡೆದಿರಬಹುದೆಂಬ ಅನುಮಾನ ಸಿಐಡಿಗೆ ಮೂಡಿದೆ. ಕೆಎಎಸ್‌ ಪ್ರಿಲಿಮ್ಸ್‌, ಮೇನ್ಸ್‌ ಹಾಗೂ ಸಂದರ್ಶನದ ಮೂರು ಹಂತಗಳಿಗೂ ಪ್ಯಾಕೇಜ್ ದರ ನಿಗದಿಪಡಿಸಿ ಅಕ್ರಮ ನಡೆಸಲಾಗಿತ್ತೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಪಶುವೈದ್ಯಾಧಿಕಾರಿ ನೇಮಕಾತಿ ತನಿಖೆ ಬಳಿಕ ಪತ್ತೆಯಾದ ಹಾಲ್‌ಟಿಕೆಟ್‌ ಹಾಗೂ ಇತರ ಸಾಕ್ಷ್ಯಗಳ ಆಧಾರದಲ್ಲಿ ಇತರೆ ಪರೀಕ್ಷೆಗಳ ಅಕ್ರಮದ ತನಿಖೆಗೆ ಸಿಐಡಿ ಮುಂದಾಗಲಿದೆ. ರಾಜ್ಯ ಸರ್ಕಾರ ಅನುಮತಿ ನೀಡಿದರೆ ಕೆಎಎಸ್‌ ನೇಮಕಾತಿ ಅಕ್ರಮದ ಕುರಿತು ಪ್ರತ್ಯೇಕವಾಗಿ ಪೂರ್ಣ ಪ್ರಮಾಣದ ತನಿಖೆ ನಡೆಸಲು ಸಿಐಡಿ ಸಿದ್ಧತೆ ನಡೆಸಿದ್ದು, ಇದರಿಂದ ಕೆಪಿಎಸ್‌ಸಿ ಹಗರಣದ ತನಿಖೆ ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆ ಇದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *