Breaking News

ರೌಡಿಶೀಟರ್‌ನಿಂದ ಲಂಚ ಪಡೆಯುವಾಗ ಪೊಲೀಸ್ ಕಾನ್ಸ್‌ಟೇಬಲ್‌ಗಳೇ ಲೋಕಾಯುಕ್ತ ಬಲೆಗೆ!

ಕಲಬುರಗಿ: ಗಡಿಪಾರು ಮಾಡುವುದಾಗಿ ಬೆದರಿಸಿ ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬ್ರಹ್ಮಪುರ ಠಾಣೆಯ ಕಾನ್‌ಸ್ಟೆಬಲ್‌ಗಳಾದ ಪರಶುರಾಮ್ ಮತ್ತು ವೀರೇಶ್ ರೌಡಿಶೀಟರ್‌ ಖನ್ನಾ ಪಟೇಲ್‌ಗೆ ಬೆದರಿಕೆ ಹಾಕಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲಿಗೆ ₹50 ಸಾವಿರ ಪಡೆದಿದ್ದ ಪೇದೆಗಳು, ಬಳಿಕ ಮತ್ತೆ ₹20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದ ತಂಡ, ಬ್ರಹ್ಮಪುರ ಠಾಣೆ ಆವರಣದಲ್ಲೇ ಲಂಚ ಪಡೆಯುವ ವೇಳೆ ದಾಳಿ ನಡೆಸಿದೆ. ದಾಳಿ ವೇಳೆ ಪರಶುರಾಮ್ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದರೆ, ವೀರೇಶ್ ಸ್ಥಳದಿಂದ ಪರಾರಿಯಾಗಿದ್ದಾನೆ. ಪರಶುರಾಮ್‌ನನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *