Breaking News

ಕಳ್ಳನಿಂದ ₹20 ಸಾವಿರ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಕಾನ್‌ಸ್ಟೆಬಲ್‌ಗಳು

ಕಲಬುರಗಿ: ರೂಢಿಗತ ಕಳ್ಳನ ಕುಟುಂಬಕ್ಕೆ ಗಡೀಪಾರು ಮಾಡುವುದಾಗಿ ಬೆದರಿಸಿ ₹20 ಸಾವಿರ ಲಂಚ ಪಡೆಯುತ್ತಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಪರಶುರಾಮ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮತ್ತೊಬ್ಬ ಕಾನ್‌ಸ್ಟೆಬಲ್‌ ವೀರೇಶ ಪರಾರಿಯಾಗಿದ್ದಾನೆ. ಬ್ರಹ್ಮಪುರ ಪೊಲೀಸ್‌ ಠಾಣೆಯ ಹಿಂಭಾಗದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಂಒಬಿ ಶೀಟ್‌ ಹೊಂದಿರುವ ಕಾರ್ತಿಕ್‌ ಪಾಟೀಲನ ಕುಟುಂಬಕ್ಕೆ ₹1 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈಗಾಗಲೇ ₹50 ಸಾವಿರ ಪಡೆದಿದ್ದ ಕಾನ್‌ಸ್ಟೆಬಲ್‌ಗಳು ಮತ್ತೆ ₹20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಕಾರ್ತಿಕ್‌ ತಂದೆ ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಬಸವರಾಜ ಎಲಿಗಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *