Breaking News

ಕೈದಿಯ ಜತೆ ಸರಸ ಸಲ್ಲಾಪದ ವಿಡಿಯೋ ಮಾಡಿ ಆತನಿಂದಲೇ ಹಣ ವಸೂಲಿ, ಪಿಎಸ್‌ಐ ಜಯಶ್ರೀಗೆ ಬಿಗ್‌ಶಾಕ್‌

ಬೆಳಗಾವಿ: ಕೈದಿಯೊಂದಿಗೆ ಪಿಎಸ್‌ಐ ಜಯಶ್ರೀ ಅವರ ಸರಸ ಸಲ್ಲಾಪದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಹಿಂಡಲಗಾ ಜೈಲಿನಲ್ಲಿದ್ದ ರೌಡಿಶೀಟರ್ ಸಾಯಿಕುಮಾರ್ ಜತೆ ಅಕ್ರಮ ಸಂಪರ್ಕ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೈದಿಗೆ ಮೊಬೈಲ್ ಒದಗಿಸಿ ವಿಡಿಯೋ ಕಾಲ್ ಮೂಲಕ ಅಶ್ಲೀಲವಾಗಿ ವರ್ತಿಸಿದ್ದ ವಿಡಿಯೋ, ಆಡಿಯೋ ಕ್ಲಿಪ್‌ಗಳು ವೈರಲ್ ಆಗಿದ್ದವು. ಅಲ್ಲದೆ, ಹಣ ವರ್ಗಾವಣೆ ಹಾಗೂ ಸ್ಕೂಟರ್‌, ಕಾರನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿರುವ ಚಾಟ್‌ಗಳು ಪತ್ತೆಯಾಗಿವೆ ಎನ್ನಲಾಗಿದೆ. ಘಟನೆ ಕುರಿತು ಆಂತರಿಕ ತನಿಖೆ ನಡೆಸಿದ ಬಳಿಕ ಕರ್ತವ್ಯ ಲೋಪ, ಅಶಿಸ್ತು ಮತ್ತು ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಐಎಸ್‌ಡಿ ಐಜಿಪಿ ಕೆ. ತ್ಯಾಗರಾಜನ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *