Breaking News

ರಾಜ್ಯದಲ್ಲೊಂದು ಅತಿಥಿ ಶಿಕ್ಷಕಿಯಿಂದ ಅಮಾನವೀಯ ಕೃತ್ಯ: ಸಾಗರದಲ್ಲಿ ರಕ್ತ ಬರುವಂತೆ ವಿದ್ಯಾರ್ಥಿಗಳಿಗೆ ಥಳಿತ

ಶಿವಮೊಗ್ಗ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆ ಎಂಬ ಕಾರಣಕ್ಕೆ ಸಾಗರ ತಾಲೂಕಿನ ಕಿರುವಾಸೆ ಕಿರಿಯ ಪ್ರಾಥಮಿಕ ಶಾಲೆಯ ಮೂವರು ಪುಟ್ಟ ಮಕ್ಕಳಿಗೆ ಅತಿಥಿ ಶಿಕ್ಷಕಿ ರಕ್ಷಿತಾ ಕೋಲಿನಿಂದ ಮನಬಂದಂತೆ ಥಳಿಸಿರುವ ಆರೋಪ ಕೇಳಿಬಂದಿದೆ. 2, 3 ಮತ್ತು 4ನೇ ತರಗತಿಯ ಮಕ್ಕಳ ಬೆನ್ನಿಗೆ ಹೊಡೆದ ಪರಿಣಾಮ ಬಾಸುಂಡೆ ಎದ್ದು, ರಕ್ತ ಬರುವಷ್ಟು ಗಾಯಗಳಾಗಿವೆ ಎನ್ನಲಾಗಿದೆ. ಮನೆಗೆ ಬಂದ ಮಕ್ಕಳ ಗಾಯಗಳನ್ನು ಕಂಡು ಪೋಷಕರು ಬೆಚ್ಚಿಬಿದ್ದಿದ್ದಾರೆ. ಘಟನೆಗೆ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕಿ ವಿರುದ್ಧ ಶಿಕ್ಷಣ ಇಲಾಖೆ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *