ಹಾಸನ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲ ಆತಂಕಕಾರಿ ರೀತಿಯಲ್ಲಿ ವಿಸ್ತರಿಸುತ್ತಿದ್ದು, 2026ರಲ್ಲಿ 167 ಪ್ರಕರಣಗಳು ದಾಖಲಾಗಿವೆ. 280 ಮಂದಿಯನ್ನು ಬಂಧಿಸಿ 77 ಕೆಜಿ ಗಾಂಜಾ ಹಾಗೂ 134 ಗ್ರಾಂ ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಮಂಗಳೂರು, ಮಡಿಕೇರಿ, ಮೈಸೂರು ಹಾಗೂ ಚಿಕ್ಕಮಗಳೂರು ಭಾಗಗಳಿಂದ ಹಾಸನಕ್ಕೆ ಗಾಂಜಾ ಅಕ್ರಮವಾಗಿ ಸರಬರಾಜಾಗುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. 25ರಿಂದ 40 ವರ್ಷದೊಳಗಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತು ಪ್ರಕರಣಗಳಲ್ಲಿ ಸಿಕ್ಕಿಬೀಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮಾದಕ ವ್ಯಸನ ತಡೆಗೆ ಪೊಲೀಸ್ ಇಲಾಖೆ ‘ಬೇಡ ಬ್ರೋ’ ಜಾಗೃತಿ ಅಭಿಯಾನ ನಡೆಸುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಾದಕ ವಸ್ತುಗಳ ಮಾರಾಟ, ಸಾಗಣೆ ಅಥವಾ ಸೇವನೆ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

