Breaking News

ಜೇವರ್ಗಿ: ಬಸ್ ಹಾಗೂ ಲಾರಿ ನಡುವೆ ಅಪಘಾತಕ್ಕೆ ಬಸ್‌ ಪ್ರಯಾಣಿಕನ ಕೈ ಕಟ್

ಕಲಬುರಗಿ: ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಪಂಪ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ, ಪ್ರಯಾಣಿಕನೊಬ್ಬನ ಕೈ ತುಂಡಾಗಿದೆ. ಗಾಯಾಳುವನ್ನು ಜೇವರ್ಗಿ ತಾಲೂಕಿನ ರೇವನೂರು ಗ್ರಾಮದ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಜೇವರ್ಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ ಯುವ ನಾಯಕ ಇಮ್ರಾನ್ ಕುಕನೂರು ಅವರು ಗಾಯಾಳುವಿಗೆ ತಕ್ಷಣ ನೆರವು ನೀಡಿ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *