Breaking News

ಅನ್ನಭಾಗ್ಯ ಅಕ್ಕಿ ಚೀಲ ವಿಚಾರಕ್ಕೆ ಕಿರಿಕ್, ‘ಕೈ’ ಮುಖಂಡ ಸೇರಿ ಮೂವರು ಅರೆಸ್ಟ್!

ಉಡುಪಿ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೀವ ಬೆದರಿಕೆ ಹಾಗೂ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ಇಟ್ಟಿದ್ದ ವಿಚಾರಕ್ಕೆ ಗಲಾಟೆ ನಡೆದಿದ್ದು, ಆರೋಪಿಗಳು ಸಂತ್ರಸ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡುವುದಾಗಿ ಹಾಗೂ ಹಣ ಸುಲಿಗೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ನಾಗೇಂದ್ರ ಪುತ್ರನ್ (37), ಪಿ. ಸುಮಂತ್ ಕುಂದರ್ (40) ಹಾಗೂ ಸಚಿನ್ ಶ್ರೀಯಾನ್ (32) ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿದ್ದ ಇಬ್ಬರನ್ನು ಮೈಸೂರಿನಲ್ಲಿ ಸೆ.2ರಂದು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿಯನ್ನು ಸೆ.1ರಂದು ವಶಕ್ಕೆ ಪಡೆಯಲಾಗಿತ್ತು. ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *